ಮಂಗಳೂರು:ಮುಂದಿನ ಒಂದೂವರೆ ತಿಂಗಳೊಳಗಾಗಿ ದ.ಕನ್ನಡ ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಒಂದೂವರೆ ತಿಂಗಳೊಳಗೆ ದ.ಕ ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಶುರು: ಡಿಸಿ - DC Dr. K V Rajendra statement
ಬುಧವಾರ ಸಂಸದರ ನೇತೃತ್ವದಲ್ಲಿ ಜಿಲ್ಲೆಯ ಬೃಹತ್ ಕೈಗಾರಿಕೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ. ಈ ವೇಳಎ ಆಮ್ಲಜನಕ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
![ಒಂದೂವರೆ ತಿಂಗಳೊಳಗೆ ದ.ಕ ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಶುರು: ಡಿಸಿ DC Dr. K V Rajendra](https://etvbharatimages.akamaized.net/etvbharat/prod-images/768-512-11562438-thumbnail-3x2-net.jpg)
ಮಂಗಳೂರಿನಲ್ಲಿ ಮಾತನಾಡಿದ ಅವರು, ಎಸ್ಡಿಆರ್ಎಫ್ ನಿಧಿ ಮೂಲಕ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಯಲ್ಲಿ 124 ನರ್ಸಿಂಗ್ ಹೋಮ್ಗಳಿವೆ. ಇವುಗಳ ಪೈಕಿ ಸರ್ಕಾರಿ ನರ್ಸಿಂಗ್ ಹೋಮ್ಗಳಲ್ಲಿ ಈಗಾಗಲೇ ಆಕ್ಸಿಜನ್ ಮ್ಯಾನ್ಯುಫ್ಯಾಕ್ಚರ್ ಯೂನಿಟ್ ಇದೆ. ಮಂಗಳೂರಿನಲ್ಲಿ 6 ಕೆಎಲ್ ಸ್ಟೋರೇಜ್ ಸಾಮರ್ಥ್ಯ ಇದೆ. ಸದ್ಯ ಯಾವುದೇ ಸಮಸ್ಯೆಯಿಲ್ಲ. ಮುಂದೆ ಯಾವುದೇ ಸಮಸ್ಯೆಯಾಗದಂತೆ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಬುಧವಾರ ಸಂಸದರ ನೇತೃತ್ವದಲ್ಲಿ ಜಿಲ್ಲೆಯ ಬೃಹತ್ ಕೈಗಾರಿಕೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದ್ದು, ಇದರಲ್ಲಿ ಕೂಡ ಆಮ್ಲಜನಕ ಸಮಸ್ಯೆಯಾಗದಂತೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ ಡಿಸಿ ತಿಳಿಸಿದರು.