ಕರ್ನಾಟಕ

karnataka

ETV Bharat / state

ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರದಾನ - mangalore latest news

2020 ರ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರದಾನ ಮಾಡಿದರು. ಹರೇಕಳ ಹಾಜಬ್ಬ ಕಳೆದ ವರ್ಷವೇ ಪದ್ಮಶ್ರೀ ಘೋಷಿಸಲಾಗಿತ್ತು. ಆದರೆ, ಕೊರೊನಾ ಕಾರಣದಿಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ.

Padma Shri awarded to Harekala Hajabba
ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ

By

Published : Nov 8, 2021, 1:18 PM IST

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿಂದು ಈ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

2020 ರ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಹರೇಕಳ ಹಾಜಬ್ಬ ಅವರಿಗೆ ಘೋಷಿಸಲಾಗಿತ್ತು. ಆದರೆ, ಕೊರೊನಾ ಕಾರಣದಿಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿರಲಿಲ್ಲ. ಈ ಹಿನ್ನೆಲೆ ಇಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅವರಿಗೆ ಪ್ರಶಸ್ತಿ ನೀಡಲಾಯಿತು.

ಹರೇಕಳ ಹಾಜಬ್ಬ ಅವರು ತಮ್ಮ ನೆಚ್ಚಿನ ಉಡುಪಾದ ಪಂಚೆ-ಶರ್ಟ್ ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಗಳೂರಿನಲ್ಲಿ ಕಿತ್ತಳೆ ವ್ಯಾಪಾರ ಮಾಡುತ್ತಿದ್ದ ಹರೇಕಳ ಹಾಜಬ್ಬ ಅವರು ಅನಕ್ಷರಸ್ಥರಾಗಿದ್ದು, ತನ್ನಂತೆ ತನ್ನೂರಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಶಾಲೆ ಕಟ್ಟಲು ಅವಿರತ ಶ್ರಮಿಸಿದ್ದರು. ಶಾಲೆ ನಿರ್ಮಾಣಕ್ಕೆ ಅವರು ಪಟ್ಟ ಪ್ರಾಮಾಣಿಕ ಪ್ರಯತ್ನ ಗುರುತಿಸಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು.

ABOUT THE AUTHOR

...view details