ಮಂಗಳೂರು:ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ತುರ್ತು ನಿಗಾ ಘಟಕದಲ್ಲಿರುವ ಸುಕ್ರಜ್ಜಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಸುಕ್ರಿ ಬೊಮ್ಮಗೌಡ ಅವರು ಕಳೆದ 3-4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ನಾಲ್ಕು ದಿನಗಳಿಂದ ತಲೆಸುತ್ತುವಿಕೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.