ಮಂಗಳೂರು: ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಹಿನ್ನೆಲೆ 4 ಮೊಬೈಲ್ಗಳನ್ನು ಫೋರೆನ್ಸಿಕ್ ಲ್ಯಾಬ್ಗೆ ಕಳುಹಿಸಲಾಗಿದೆ ಎಂದು ದ.ಕ ಜಿಲ್ಲಾ ಎಸ್ ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಪಾಕ್ ಪರ ಘೋಷಣೆ ಪ್ರಕರಣ: ಫೋರೆನ್ಸಿಕ್ ಲ್ಯಾಬ್ಗೆ 4 ಮೊಬೈಲ್ಗಳ ರವಾನೆ
ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆಯನ್ನು ಎಸ್ಡಿಪಿಐ ಕಾರ್ಯಕರ್ತರು ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು ಎಸ್ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಪಾಕ್ ಪರ ಘೋಷಣೆ ಪ್ರಕರಣ; 4 ಮೊಬೈಲ್ಗಳನ್ನು ಫಾರೆನ್ಸಿಕ್ ಲ್ಯಾಬ್ಗೆ ರವಾನೆ
ಈ ಸುದ್ದಿಯನ್ನೂ ಓದಿ: ಪಾಕ್ ಪರ ಘೋಷಣೆ ಹಾಕಿದ ವಿಡಿಯೋ ವೈರಲ್: ಎಸ್ಡಿಪಿಐ ಬೆಂಬಲಿಗರ ವಿರುದ್ಧ ಪ್ರಕರಣ
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ಕು ಬೇರೆ - ಬೇರೆ ವಿಡಿಯೋಗಳು ಸಿಕ್ಕಿದೆ. ಆ ವಿಡಿಯೋ ರೆಕಾರ್ಡ್ ಮಾಡಿರುವ ನಾಲ್ಕು ಮೊಬೈಲ್ಗಳನ್ನು ಫೋರೆನ್ಸಿಕ್ ಲ್ಯಾಬ್ಗೆ ಕಳುಹಿಸಲಾಗಿದೆ ಎಂದರು.
Last Updated : Jan 2, 2021, 11:21 AM IST