ಮಂಗಳೂರು: ನಗರದ ಬೈಕಂಪಾಡಿಯ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದಿರುವ ಕಳ್ಳತನ ಯತ್ನ ಹಾಗೂ ವಿಗ್ರಹಗಳನ್ನು ಒಡೆದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ರೋಹಿತಾಶ್ವ ಬೈಕಂಪಾಡಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದ. ಈತ ದೈವಸ್ಥಾನದಲ್ಲಿ ನಗ - ನಾಣ್ಯದ ಆಸೆಗೆ ಕಳವು ಮಾಡಲು ಮುಂದಾಗಿದ್ದ. ಆದರೆ, ಯಾವುದೇ ಮೌಲ್ಯಯುತ ವಸ್ತುಗಳು ದೊರೆಯದಿರುವ ಹಿನ್ನೆಲೆ ಅಲ್ಲಿನ ವಿಗ್ರಹಗಳನ್ನು ಭಗ್ನಗೊಳಿಸಲು ಯತ್ನಿಸಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.