ಮಂಗಳೂರು :ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 140ಕ್ಕೂ ಅಧಿಕ ಎನ್ಡಿಪಿಎಸ್ ಆರೋಪಿಗಳ ಪೆರೇಡ್ ಇಂದು ಪೊಲೀಸ್ ಮೈದಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಎಲ್ಲಾ ಆರೋಪಿಗಳನ್ನು ಮೈದಾನದಲ್ಲಿ ಮೂರು ಸುತ್ತು ಪರೇಡ್ ನಡೆಸಲಾಯಿತು. ಇನ್ನು ಮುಂದೆ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಎಚ್ಚರಿಕೆ ನೀಡಿದ ಪೊಲೀಸ್ ಆಯುಕ್ತರು, ಒಂದು ವೇಳೆ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಿದ್ದಲ್ಲಿ ರೌಡಿಶೀಟರ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ 150ಕ್ಕೂ ಅಧಿಕ ಡ್ರಗ್ಸ್ ಪೆಡ್ಲಿಂಗ್ ಕುರಿತಂತೆ ಸುಮಾರು 350ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಈ ಹಿನ್ನೆಲೆ ಇಂದು ಸುಮಾರು 140ಕ್ಕೂ ಅಧಿಕ ಎನ್ಡಿಪಿಎಸ್ ಆರೋಪಿಗಳನ್ನು ಪರೇಡ್ ನಡೆಸಲಾಗಿದೆ. ಇವರಲ್ಲಿ ಒಂದೆರಡು ಸೇರಿದಂತೆ 15 ಪ್ರಕರಣಗಳಲ್ಲಿದ್ದ ಆರೋಪಿಗಳು ಭಾಗವಹಿಸಿದ್ದಾರೆ ಎಂದರು.
ಆರೋಪಿಗಳಿಗೆ ಮನವರಿಕೆ ಮಾಡುವ ಉದ್ದೇಶದಿಂದ ಈ ಪರೇಡ್ನ ಆಯೋಜಿಸಲಾಗಿದೆ. ಡ್ರಗ್ಸ್ ಸೇವನೆಯಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಎಲ್ಲಾ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ.