ಕಡಬ(ದಕ್ಷಿಣ ಕನ್ನಡ):ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ಆತನ ತಂದೆಗೆ ನ್ಯಾಯಾಲಯವು ಬರೋಬ್ಬರಿ 20 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆ.ಸಿ. ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ದಂಡ ಪಾವತಿಸಿದವರು. 2020ನೇ ಇಸವಿಯಲ್ಲಿ ಕೊಯಿಲದಲ್ಲಿ ಅಬ್ದುಲ್ ರಹಿಮಾನ್ ಎಂಬವರು ತಮ್ಮ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದರು. ಆ ಸಮಯದಲ್ಲಿ ಬೈಕ್ ಅಪಘಾತವಾಗಿ ಅಪ್ರಾಪ್ತ ಬಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.