ಮಂಗಳೂರು: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರೋಗಿಗಳು ವಿಡಿಯೋ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಿರಿ ಈ ಆರೋಪವನ್ನು ತಳ್ಳಿಹಾಕಿದ್ದಾರೆ.
ವೆನ್ಲಾಕ್ ಕೋವಿಡ್ ಆಸ್ಪತ್ರೆ ವ್ಯವಸ್ಥೆ ಬಗ್ಗೆ ರೋಗಿಗಳ ಅಸಮಾಧಾನ: ಆರೋಪ ತಳ್ಳಿಹಾಕಿದ ಡಿಹೆಚ್ಒ - ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ಪ್ರತಿಕ್ರಿಯೆ
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಆದರೆ, ಈ ಬಗ್ಗೆ ಈಟಿವಿ ಭಾರತದೊಂದಿಗೆ ಪ್ರತಿಕ್ರಿಯಿಸಿರುವ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಿರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿದ್ದು, ಸುಳ್ಳು ಆರೋಪ ಮಾಡಲಾಗಿದೆ. ಸೋಂಕಿತರಿಗೆ ವಿಟಮಿನ್ ಸಿ ಮಾತ್ರೆಗಳನ್ನು ನೀಡಲಾಗುತ್ತಿದ್ದು, ಬೇರೆ ಯಾವ ಮಾತ್ರೆಗಳನ್ನು ನೀಡಲಾಗುತ್ತಿಲ್ಲ. ಯಾರಿಗೂ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲು ವ್ಯವಸ್ಥೆ ಇಲ್ಲ. ಆದರೆ ಸೋಂಕಿತರ ಬೆಡ್ಗಳ ನಡುವೆ ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಲಾಗಿದೆ. ಜೊತೆಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆಯನ್ನು ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಉತ್ತಮವಾದ ಆಹಾರ ವ್ಯವಸ್ಥೆ ಇದೆ. ಆದರೂ ಕೆಲವೊಂದು ರೋಗಿಗಳು ಸುಳ್ಳು ಆರೋಪ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.