ಕರ್ನಾಟಕ

karnataka

ETV Bharat / state

ಸಾರ್ವಜನಿಕ‌ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ: ದ.ಕ.ಜಿಲ್ಲಾಧಿಕಾರಿ ಎಚ್ಚರಿಕೆ

ಕೊರೊನಾ ನಿಯಂತ್ರಣ ಹಿನ್ನೆಲೆ ಮಾಸ್ಕ್ ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ 250 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

Manglure dc
Manglure dc

By

Published : Oct 9, 2020, 10:28 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಸರಿಯಾದ ಕ್ರಮದಲ್ಲಿ ಮಾಸ್ಕ್ ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ 250 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಿರ್ದೇಶನವನ್ನು ಪಾಲಿಸದೆ ಸಾರ್ವಜನಿಕರು ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂಥವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ಅಧ್ಯಾದೇಶ 2020 ಕಲಂ 2 (3), 6(1) (2) ಅನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 57 ಅನ್ವಯ ಕಾನೂನು ರೀತಿಯ ಕ್ರಮ ಜರಗಿಸಲು ಆದೇಶಿಸಿದ್ದಾರೆ.

ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಉಲ್ಲೇಖ (2)ರ ಸರ್ಕಾರದ ಮಾರ್ಗಸೂಚಿಗಳೊಂದಿಗೆ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details