ಮಂಗಳೂರು : ಕನಿಷ್ಠ ಕೂಲಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ರೈತ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕನಿಷ್ಠ ಕೂಲಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿ ರೈತ ಕಾರ್ಮಿಕರ ಪ್ರತಿಭಟನೆ - ಕನಿಷ್ಠ ಕೂಲಿ, ಪಿಂಚಣಿ ಬೇಡಿಕೆ
ಸಿಐಟಿಯು, ಎಐಕೆಎಸ್ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಕನಿಷ್ಠ ಕೂಲಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
Mangalore
ಸಿಐಟಿಯು, ಎಐಕೆಎಸ್ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕನಿಷ್ಠ ಕೂಲಿ, ಪಿಂಚಣಿ, ಸಾಮಾಜಿಕ ಭದ್ರತೆಗಾಗಿ ಹೊಸ ಯೋಜನೆಗಳನ್ನು ರೂಪಿಸಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಗೊಳಿಸಬೇಕು. ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕು. ರೈತರಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿದರು.