ಉಳ್ಳಾಲ(ದಕ್ಷಿಣ ಕನ್ನಡ):ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಅವರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮುಳ್ಳೇರಿಯದ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಸಾವನ್ನಪ್ಪಿದವರು. ತಲಪಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66 ದಾಟುವಾಗ ಕೇರಳದ ಕಡೆಯಿಂದ ಅತಿವೇಗದಿಂದ ಬಂದ ಕಲ್ಲು ಲೋಡ್ ತುಂಬಿದ್ದ ಲಾರಿ ಅವರಿಗೆ ಗುದ್ದಿತ್ತು.
ತಲೆಗೆ ಗಂಭೀರವಾಗಿ ಗಾಯವಾಗಿದ್ದು ಟೋಲ್ ಸಿಬ್ಬಂದಿ ತಮ್ಮದೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಮಂಗಳೂರು ಸಂಚಾರಿ ಠಾಣಾ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಸಂತ್ ರೈ ಅವರು ಕಳೆದ 10 ವರ್ಷಗಳಿಂದ ಕಾಸರಗೋಡಿನ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.