ಕರ್ನಾಟಕ

karnataka

ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಭಕ್ತರು!

By

Published : Oct 12, 2020, 7:04 AM IST

Updated : Oct 12, 2020, 9:52 AM IST

ಕುಕ್ಕೆ‌ ಸುಬ್ರಹ್ಮಣ್ಯದಲ್ಲಿ ಇಂದು ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೋಮವಾರದ ಸೇವೆ ನೆರವೇರಿಸಲು ಭಾನುವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಲಿನಲ್ಲಿ ನಿಂತಿರುವ ಭಕ್ತರು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಲಿನಲ್ಲಿ ನಿಂತಿರುವ ಭಕ್ತರು

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಇಂದು ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೋಮವಾರದ ಸೇವೆ ನೆರವೇರಿಸಲು ಭಾನುವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ಪಡೆಯದೇ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ಭಾನುವಾರ ರಾತ್ರಿಯೇ ದೇಗುಲದ ಕಚೇರಿ ಬಳಿ ಸರತಿ‌ ಸಾಲಿನಲ್ಲಿ ನಿಂತಿದ್ದರು.

ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನೆಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ‌ ಸಾಲಿನಲ್ಲಿ ನಿಂತಿದ್ದರು. ದೇಗುಲದಲ್ಲಿ ಸೇವೆಗಳಿಗೆ ಅವಕಾಶ ಕಲ್ಪಿಸಿದ ಸರ್ಕಾರ ಭಕ್ತರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂಬುದಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರು ಆಗ್ರಹಿಸಿದ್ದಾರೆ.

Last Updated : Oct 12, 2020, 9:52 AM IST

ABOUT THE AUTHOR

...view details