ಮಂಗಳೂರು: ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ನಗರದ ಪುರಭವನದ ಮುಂಭಾಗ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ - ಮಂಗಳೂರು ಪ್ರತಿಭಟನೆ ಸುದ್ದಿ
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ
ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಸೈಕಲ್ ರ್ಯಾಲಿ ನಡೆಸಲಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಪ್ರತಿಭಟನಾಕಾರರು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರ ಮುಖವಾಡ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.