ಮಂಗಳೂರು: ಉಪ್ಪಿನಂಗಡಿಯಲ್ಲಿ ಕಾರ್ಯಕರ್ತರ ಮೇಲೆ ನಡೆದ ಲಾಠಿಚಾರ್ಜ್ ವಿರೋಧಿಸಿ ಪಿಎಫ್ಐ ಕಾರ್ಯಕರ್ತರು 'ಎಸ್ಪಿ ಕಚೇರಿ ಚಲೋ' ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಉಪ್ಪಿನಂಗಡಿಯಲ್ಲಿ ಹಲ್ಲೆ ಪ್ರಕರಣವೊಂದರ ಸಂಬಂಧ ಕೇಸ್ಗೆ ಸಂಬಂಧವಿಲ್ಲದ ಪಿಎಫ್ಐ ನಾಯಕರನ್ನು ಬಂಧಿಸಿದ್ದರ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಇದನ್ನು ವಿರೋಧಿಸಿ ಪಿಎಫ್ಐ ಎಸ್ಪಿ ಕಚೇರಿ ಚಲೋ ಕಾರ್ಯಕ್ರಮ ಆಯೋಜಿಸಿತ್ತು.