ಮಂಗಳೂರು: ಪಿಎಫ್ಐ ಮತ್ತು ಸಹವರ್ತಿ ಸಂಸ್ಥೆಗಳನ್ನು ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರದಲ್ಲಿರುವ ಪಿಎಫ್ಐ ಜಿಲ್ಲಾ ಕಚೇರಿಗೆ ನಗರ ಪೊಲೀಸರು ಬೀಗಮುದ್ರೆ ಹಾಕಿದರು.
ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಯನ್ನು ಪರಿಶೀಲನೆ ಮಾಡಿ ಸೀಜ್ ಮಾಡಿ ಬೀಗಮುದ್ರೆ ಹಾಕಲಾಗಿದೆ. ಕಳೆದ ಎರಡು ದಿನಗಳಿಂದ ಪಿಎಫ್ಐ ಕಚೇರಿಗೆ ಬೀಗ ಹಾಕಿ ಇದ್ದು, ಇಂದು ಕಚೇರಿ ಬೀಗ ಒಡೆದು ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಳಿಕ ಬೀಗ ಜಡಿದು ಸೀಲ್ ಮಾಡಿದರು.
ಪಿಎಫ್ಐ ನಿಷೇಧ: ಮಂಗಳೂರು ಜಿಲ್ಲಾ ಕಚೇರಿಗೆ ಬೀಗಮುದ್ರೆ ಹಾಕಿದ ಪೊಲೀಸರು ಈ ವೇಳೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಪಿಎಫ್ಐ ಹಾಗೂ ಸಹ ಸಂಘಟನೆಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಜಿಲ್ಲಾ ಕಚೇರಿಗೆ ಬೀಗ ಹಾಕಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ನಗರದ ಮೂರು ಉಪವಿಭಾಗದಲ್ಲಿ ಕಾರ್ಯಾಚರಣೆ ನಡೆಸಿ ಕಚೇರಿಯಲ್ಲಿನ ವಸ್ತುಗಳನ್ನು ಸೀಜ್ ಮಾಡಿ ಕಚೇರಿಗೆ ಸೀಲ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಪಿಎಫ್ಐನ 14 ಮುಖಂಡರ ಬಂಧನ: ಓರ್ವನಿಗೆ ಅನಾರೋಗ್ಯ