ಬೆಳ್ತಂಗಡಿ: ಮೂಡುಬಿದಿರೆ -ಬೆಳ್ತಂಗಡಿ ನಡುವೆ ಸಂಚರಿಸುವ ಖಾಸಗಿ ಬಸ್ನ ಫುಟ್ ಬೋರ್ಡ್ನಲ್ಲಿ ವಿದ್ಯಾರ್ಥಿಗಳು ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಾ ಪ್ರಯಾಣ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳ್ತಂಗಡಿ-ಮೂಡುಬಿದಿರೆ ಮಾತ್ರವಲ್ಲದೆ ತಾಲೂಕಿನ ಬಹುತೇಕ ಕಡೆಗಳಲ್ಲಿ ವಿದ್ಯಾರ್ಥಿಗಳು ಅನಿವಾರ್ಯವಾಗಿ ಫುಟ್ಬೋರ್ಡ್ನಲ್ಲಿ ನಿಂತು ಪ್ರಯಾಣಿಸುವುದು ಸರ್ವೇ ಸಾಮಾನ್ಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಸ್ಗಳ ಕೊರತೆ, ಬಸ್ ಇದ್ದರೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಮತ್ತು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜಿಗೆ ತಲುಪಬೇಕಾದ ಕಾರಣದಿಂದ ಈ ರೀತಿ ಫುಟ್ಬೋರ್ಡ್ನಲ್ಲಿ ನೇತಾಡಿಕೊಂಡು ಹೋಗುತ್ತಾರೆ. ಆದರೆ, ಈ ಪೋಟೋದಲ್ಲಿ ಕಾಣುವ ರೀತಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗಿರುವುದು ನಿಜಕ್ಕೂ ಅಪಾಯಕಾರಿ.