ಕರ್ನಾಟಕ

karnataka

By

Published : Jan 24, 2020, 8:17 PM IST

ETV Bharat / state

ಪಿಕಪ್​​ ವಾಹನ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಅಪಘಾತಕ್ಕೀಡಾಡ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

pickup-vehicle-accident-one-death
ಪಿಕಪ್​​ ವಾಹನ ಅಪಘಾತ, ಓರ್ವ ಸಾವು ಇಬ್ಬರ ಸ್ಥತಿ ಗಂಭಿರ

ಬೆಳ್ತಂಗಡಿ: ತಾಲೂಕಿನ ಶಿಬಾಜೆ ಬಳಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಇಳಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿವೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನ್ನಪ್ಪಿದ ವ್ಯಕ್ತಿಯನ್ನು ಕೊಕ್ಕಡದ ಪೆಲತಿಂಜ ನಿವಾಸಿ ಹರೀಶ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ವೆನ್​ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗದ ವಾಹನ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details