ETV Bharat Karnataka

ಕರ್ನಾಟಕ

karnataka

ETV Bharat / state

ಕಡಲ್ಕೊರೆತ ತಡೆಯಲು ಶಾಶ್ವತ ಪರಿಹಾರಕ್ಕೆ ಯೋಜನೆ.. ಸಂಸದ ನಳಿನ್‌ಕುಮಾರ್‌ ಕಟೀಲ್‌ - MP Nalin visited Ullal's sea

ಕಡಲ್ಕೊರೆತ ತಡೆಯಲು ಶಾಶ್ವತ ಪರಿಹಾರಕ್ಕಾಗಿ ಯೋಜನೆಯನ್ನು ರೂಪಿಸಲು ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಎಲ್ಲವೂ ಸರಿ ಹೋಗಲಿದೆ ಎಂದು ಸಂಸದ ನಳೀನ್​ ಕುಮಾರ್​ ಕಟೀಲ್​ ಹೇಳಿದ್ದಾರೆ.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಯೋಜನೆ ಸಂಸದ ನಳಿನ್
author img

By

Published : Aug 9, 2019, 10:48 AM IST

ಮಂಗಳೂರು: ಕಡಲ್ಕೊರೆತ ತಡೆಯಲು ಶಾಶ್ವತ ಪರಿಹಾರಕ್ಕಾಗಿ ಯೋಜನೆಯನ್ನು ರೂಪಿಸಲು ಅನುದಾನ ಬಿಡುಗಡೆಯಾಗಿದ್ದು,ಶೀಘ್ರದಲ್ಲೇ ಎಲ್ಲವೂ ಸರಿ ಹೋಗಲಿದೆ ಎಂದು ಸಂಸದ ಸಂಸದ ನಳೀನ್‌ಕುಮಾರ್​ ಕಟೀಲ್​ ಹೇಳಿದ್ದಾರೆ.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಯೋಜನೆ ಸಂಸದ ನಳಿನ್

ನಗರದ ಉಳ್ಳಾಲದ ಸೋಮೇಶ್ವರ ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಉಳ್ಳಾಲದಿಂದ ಕಾಮಗಾರಿ ಪ್ರಾರಂಭವಾಗಿದೆ. ವೈಜ್ಞಾನಿಕವಾದ ಕಾಮಗಾರಿ ನಡೆಯಬೇಕಾಗಿದ್ದು, ತಜ್ಞರಿಂದ ಮಾಹಿತಿ ಪಡೆದು ವರ್ಷ ವರ್ಷ ಬದಲಾಯಿಸುವ ಕೆಲಸ ಆಗುತ್ತಿದೆ. ಕಳೆದ ಬಾರಿ ನಮಗೆ ರಾಜ್ಯ ಸರ್ಕಾರ ಅಷ್ಟೊಂದು ಸಹಕಾರ ನೀಡಿಲ್ಲ. ಈ ಬಾರಿ ನಮ್ಮದೇ ಸರ್ಕಾರವಿದ್ದು, ವರದಿಗಳನ್ನು ಮುಖ್ಯಮಂತ್ರಿಗಳಿಗೆ ನೀಡಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಒಳ್ಳೆಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಆದೇಶದ ಮೇರೆಗೆ ನಾನು ಹಾಗೂ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಈ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಅಧಿಕಾರಿಗಳಿಂದ ಹಾಗೂ ಇಲ್ಲಿನ ಜನರಲ್ಲಿ ಮಾತನಾಡಿ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವರದಿ ನೀಡುತ್ತೇವೆ. ಇಲ್ಲಿಗೆ ಅಧಿಕಾರಿಗಳನ್ನು ನಿಯೋಜನೆ ಮಾಡಿ ತುರ್ತು ಕ್ರಮಗಳಾಗಬೇಕು. ಅದಕ್ಕೆ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಆದೇಶ ನೀಡಿದ್ದು, ಅಧಿಕಾರಿಗಳು ಪರಿಹಾರ ಕಾರ್ಯವನ್ನು ಮಾಡುತ್ತಾರೆ ಎಂದು ನಳಿನ್ ಕುಮಾರ್ ಹೇಳಿದರು.

ABOUT THE AUTHOR

...view details