ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ಸರ್ಕಾರಿ ಮತ್ತು ಪಕ್ಷದ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಎಂಎನ್ಎಂಪಿಟಿಯಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ನಗರದ ಬಂಗ್ರಕೂಳೂರಿನಲ್ಲಿ ಇರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಾರ್ವಜನಿಕ ಸಭೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕಿನಿಂದ 25 ಸಾವಿರ ಮಂದಿ ಸೇರಿಸುವಂತೆ ಬಿಜೆಪಿ ಯೋಜಿಸಿದೆ.