ಕರ್ನಾಟಕ

karnataka

ETV Bharat / state

ಬಂಟ್ವಾಳ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ವ್ಯಕ್ತಿ ಬಂಧನ - Bantwal POCSO case news

ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ರಾತ್ರಿ ವೇಳೆ ಮನೆಗೆ ಬಂದು ಬಾಲಕಿಯ ತಾಯಿಯನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ..

Bantwal
ಪುಂಜಾಲಕಟ್ಟೆ ಪೊಲೀಸರು

By

Published : Feb 19, 2021, 12:12 PM IST

ಬಂಟ್ವಾಳ :ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರುವಾಲು ಎಂಬಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಡಿ ಆರೋಪಿಯನ್ನ ಬಂಧಿಸಲಾಗಿದೆ.

ಸಮದ್ ನೆಕ್ಕಿಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದಿದ್ದ ಸಂದರ್ಭ ಆರೋಪಿ ಸಮದ್ ಆ ಮನೆ ರಿಪೇರಿ ಕೆಲಸ ಮಾಡಲು ಬಂದಿದ್ದಾನೆ. ಬಳಿಕ ಆಗಾಗ ಆ ಮನೆಗೆ ಬರುತ್ತಿದ್ದನಂತೆ.

ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ರಾತ್ರಿ ವೇಳೆ ಮನೆಗೆ ಬಂದು ಬಾಲಕಿಯ ತಾಯಿಯನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣಾ ಎಸ್ಐ ಸೌಮ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details