ಕರ್ನಾಟಕ

karnataka

ETV Bharat / state

ಫಲ್ಗುಣಿ ನದಿಗೆ ವಿಷ ಹಾಕಿದ ಕಿಡಿಗೇಡಿಗಳು: ಸಾವಿರಾರು ಮೀನುಗಳ ಮಾರಣಹೋಮ - ವೇಣೂರು ಬಳಿ ಪಲ್ಗುಣಿ ನದಿಗೆ ವಿಷ ಹಾಕಿದ ಕಿಡಿಗೇಡಿಗಳು

ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಫಲ್ಗುಣಿ ನದಿಗೆ ಕಿಡಿಗೇಡಿಗಳು ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

Poisoned in the Palguni River near Venur
Poisoned in the Palguni River near Venur

By

Published : May 1, 2020, 3:18 PM IST

ಬೆಳ್ತಂಗಡಿ: ತಾಲೂಕಿನ ವೇಣೂರು ಸಮೀಪದ ದಾಡೇಲು ಎಂಬಲ್ಲಿ ಫಲ್ಗುಣಿ ನದಿಗೆ ಕಿಡಿಗೇಡಿಗಳು ವಿಷ ಹಾಕಿದ್ದು ಸಾವಿರಾರು ಮೀನುಗಳು ಸಾವಿಗೀಡಾಗಿವೆ.

ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದ್ದು, ದುರ್ನಾತ ಬೀರುತ್ತಿದೆ. ಪ್ರಾಣಿ ಪಕ್ಷಿಗಳು ಈ ನದಿ ನೀರನ್ನೇ ಕುಡಿಯುತ್ತಿದ್ದು, ಅವುಗಳು ಕೂಡ ಸಾಯುವ ಭೀತಿ ಎದುರಾಗಿದೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರೂ ಪೊಲೀಸರು ಕಾಳಜಿ ವಹಿಸಿಲ್ಲ ಎಂದು ಜನರು ಆರೋಪಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ಗಮನಕ್ಕೆ ತಂದು ಮೀನುಗಳಿಗೆ ವಿಷ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ವೇಣೂರು ಬಳಿ ಫಲ್ಗುಣಿ ನದಿಗೆ ವಿಷ ಹಾಕಿದ ಕಿಡಿಗೇಡಿಗಳು

ಸ್ಥಳೀಯ ನಿವಾಸಿಗಳಾದ ಉಮೇಶ್ ನಡ್ತಿಕಲ್ಲು, ಶ್ರೀಧರ ಪೂಜಾರಿ, ಸಂದೇಶ್, ಹರೀಶ್ ಆಚಾರ್ಯ, ಸುಂದರ ಪೂಜಾರಿ, ಗ್ರಾ.ಪಂ. ಸದಸ್ಯರಾದ ಲಕ್ಷ್ಮಣ ಪೂಜಾರಿ, ಹರೀಶ್ ಪಿ.ಎಸ್ ಸತ್ತ ಮೀನುಗಳನ್ನು ನದಿಯಿಂದ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

ABOUT THE AUTHOR

...view details