ಕರ್ನಾಟಕ

karnataka

ETV Bharat / state

ಫರ್ನಿಶಿಂಗ್​​ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರ ದಾಳಿ, ನಾಲ್ವರ ಬಂಧನ - ಬೃಹತ್ ಫರ್ನಿಶಿಂಗ್​​ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರ ದಾಳಿ

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಯಾವುದೇ ಹೆದರಿಕೆ ಇಲ್ಲದೇ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

police-arrested-four-persons-in-furnish-oil-mixing-case
ಬೃಹತ್ ಫರ್ನಿಶ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರ ದಾಳಿ, ನಾಲ್ವರ ಬಂಧನ

By

Published : Jun 30, 2021, 2:12 AM IST

Updated : Jun 30, 2021, 5:12 AM IST

ಮಂಗಳೂರು : ನೆಲ್ಯಾಡಿ ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆ ಮೇಲೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ.

ದಾಳಿಯ ವೇಳೆ ಎರಡು ಟ್ಯಾಂಕರ್, ಮಿಕ್ಸಿಂಗ್​​ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹೊಸಮಜಲು ಸೇತುವೆಯ ಬಳಿ ಕೆಲವು ವರ್ಷಗಳಿಂದ ಈ ಆಯಿಲ್ ಮಿಕ್ಸಿಂಗ್ ದಂಧೆ ಅವ್ಯಾಹತವಾಗಿ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ ಮಾಹಿತಿ ಸೋರಿಕೆಯಾಗಿ ಆ ಪ್ರಯತ್ನಗಳು ವಿಫಲವಾಗುತ್ತಿದ್ದವು.

ಬೃಹತ್ ಫರ್ನಿಶಿಂಗ್​​ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರ ದಾಳಿ

ಆದರೆ ಮಂಗಳವಾರ ಸಂಜೆ ಖಚಿತ ಮಾಹಿತಿ ಆಧರಿಸಿ ಪುತ್ತೂರು ಡಿವೈಎಸ್ಪಿ ಗಾನಾ ಪಿ.ಕುಮಾರ್ ನೇತೃತ್ವದ ಪೊಲೀಸರ ತಂಡವು ಈ ಅಡ್ಡೆಗೆ ದಾಳಿ ಮಾಡಿ ಅಕ್ರಮವನ್ನು ಪತ್ತೆಹಚ್ಚಿದೆ. ಪೊಲೀಸರು ದಾಳಿ ಮಾಡುವ ಸಮಯದಲ್ಲಿ ಎರಡು ಟ್ಯಾಂಕರ್​ಗಳಲ್ಲಿ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ದಂಧೆ ನಡೆಯುತ್ತಿತ್ತು. ದಾಳಿ ಮಾಡಿದ ಸಮಯದಲ್ಲಿ ಸುಮಾರು 36 ಸಾವಿರ ಲೀಟರ್​​ನಷ್ಟು ಫರ್ನಿಶಿಂಗ್ ಆಯಿಲ್ ಪತ್ತೆಯಾಗಿದೆ.

ಭೂಗತವಾಗಿ ಎರಡು ಬೃಹತ್ ಟ್ಯಾಂಕ್ ಗಳು, ವಿದ್ಯುತ್ ಹಾಗೂ ಡೀಸೆಲ್‌ ಚಾಲಿತ ಪಂಪುಗಳು ಪತ್ತೆಯಾಗಿದೆ. ವಿಪರ್ಯಾಸವೆಂದರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಯಾವುದೇ ಹೆದರಿಕೆ ಇಲ್ಲದೇ ಈ ದಂಧೆ ನಡೆಯುತ್ತಿತ್ತು.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಋಷಿಕೇಶ್ ಸೋನಾವಣೆ, ಎಎಸ್​ಪಿ ವಿ.ಬಿ ಭಾಸ್ಕರ್, ಕಡಬ ತಹಶಿಲ್ದಾರ್ ಅನಂತಶಂಕರ್, ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಸುಷ್ಮಾ, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಮತ್ತು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಪೂರ್ವ ತಾಲೂಕಿನಲ್ಲಿ ಮಿನಿ ಲಾಲ್​ಬಾಗ್​: ಇಂದು ಸಿಎಂ ಬಿಎಸ್​ವೈ ಉದ್ಘಾಟನೆ

ಈ ಅಕ್ರಮ ದಂಧೆಯಲ್ಲಿ ಉನ್ನತ ಮಟ್ಟದಲ್ಲಿ ಪ್ರಾಬಲ್ಯವಿರುವ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದೆ. ಈ ಅಕ್ರಮ ವ್ಯವಹಾರದಲ್ಲಿ ಪೊಲೀಸ್ ಅಧಿಕಾರಿಗಳು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Last Updated : Jun 30, 2021, 5:12 AM IST

ABOUT THE AUTHOR

...view details