ಮಂಗಳೂರು: ಗಾಂಜಾ ಸೇವಿಸುತ್ತಿದ್ದ ಆರೋಪದಡಿ ಓರ್ವನನ್ನು ಇಲ್ಲಿನ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಸೇವನೆ : ಮಂಗಳೂರಲ್ಲಿ ಓರ್ವನ ಬಂಧನ - ಮಂಗಳೂರು ಗಾಂಜಾ ಸೇವನೆ ಪ್ರಕರಣ
ಗಾಂಜಾ ಸೇವನೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರಿನ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore police station
ಪುತ್ತೂರು ತಾಲೂಕಿನ ಮುರ ನಿವಾಸಿ ಎಂ.ಸೈಯದ್ ನಯೀಮ್ (27) ಬಂಧಿತ ಆರೋಪಿ. ಈತ ಮಂಗಳೂರಿನ ಪಂಪ್ವೆಲ್ ಸಭಾಂಗಣದ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದನು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಕರಣ ದಾಖಸಿಕೊಂಡಿದ್ದಾರೆ.