ಪುತ್ತೂರು(ದ.ಕ):ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ-ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪುತ್ತೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಓರ್ವನ ಬಂಧನ, ಮತ್ತೋರ್ವ ಪರಾರಿ - ಕೆಮ್ಮಿಂಜೆ ಗ್ರಾಮದಲ್ಲಿ ಗಾಂಜಾ ಮಾರಾಟ ಸುದ್ದಿ
ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ.
![ಪುತ್ತೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಓರ್ವನ ಬಂಧನ, ಮತ್ತೋರ್ವ ಪರಾರಿ Puttur](https://etvbharatimages.akamaized.net/etvbharat/prod-images/768-512-8904830-thumbnail-3x2-mng.jpg)
ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಸಂಜೆ ನೈತಾಡಿ -ಬೆದ್ರಾಳ ಸಾರ್ವಜನಿಕ ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸ್ ನಿರೀಕ್ಷಕರು ಠಾಣಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಅದರಲ್ಲಿ ಓರ್ವ ಸಿಕ್ಕಿಬಿದ್ದಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಪರಾರಿಯಾದಾತ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.
ಇನ್ನು ಬಂಧಿತನಿಂದ ಸುಮಾರು 3 ಸಾವಿರ ರೂ. ಮೌಲ್ಯದ 166 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕಲಂ 8(ಸಿ), 20(ಬಿ), ಎನ್ಡಿಪಿಎಸ್ ಆ್ಯಕ್ಟ್ನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.