ಪುತ್ತೂರು :ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಬಕ ಗ್ರಾಪಂನಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದSDPI ಕಾರ್ಯಕರ್ತರು ಕಬಕ ಗ್ರಾಪಂ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ಕೊಡುವ ಸಂದರ್ಭದಲ್ಲಿ ರಥಯಾತ್ರೆಯಲ್ಲಿದ್ದ ದೇಶ ಭಕ್ತರ ಭಾವಚಿತ್ರದ ಜೊತೆಗೆ ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಕೂಡ ಅಳವಡಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದ್ದರು.
ಈ ವೇಳೆ ಮಾತಿನ ಚಕಮಕಿ ನಡೆದು ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಸ್ವಾತಂತ್ರ್ಯ ಸ್ವರಾಜ್ಯ ರಥ ಅಡ್ಡಿಪಡಿಸಿ ದೇಶದ್ರೋಹದ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿ ಕಬಕ ಗ್ರಾಪಂ ದೂರು ನೀಡಿತ್ತು. ಈ ಸಂಬಂಧ ಪೊಲೀಸರು ಮೂವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಗ್ರಾಪಂಗೆ ಭೇಟಿನ ನೀಡಿದ ಶಾಸಕ ಸಂಜೀವ ಮಠಂದೂರು :
ಪುತ್ತೂರು :ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಪಂನಲ್ಲಿ ಎಸ್‌ಡಿಪಿಐ ಕಾರ್ಯರ್ತರು ತಡೆ ಒಡ್ಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇವರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಗ್ರಾಪಂಗೆ ಭೇಟಿನ ನೀಡಿದ ಶಾಸಕ ಸಂಜೀವ ಮಠಂದೂರು ಸ್ವಾತಂತ್ರ್ಯ ಆಚರಣೆಗೆ ಅಡ್ಡಿ ಪಡಿಸಿದವರನ್ನು ಗುರುತಿಸಿ ಪೊಲೀಸ್ ಇಲಾಖೆಗೆ ದೂರು ನೀಡಲು ಕ್ರಮ ಕೈಗೊಳ್ಳುವಂತೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಿಗೆ ಸೂಚಿಸಿದರು. ಅಲ್ಲದೆ ದೇಶದ್ರೋಹ ಕಾಯ್ದೆಯಡಿ ಕ್ರಮ ಕೈಗೊಳ್ಳಿ ಎಂದು ವೃತ್ತ ನಿರೀಕ್ಷಕ ಗೋಪಾಲ ನಾಯ್ಕರವರಿಗೆ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿ ಪಡಿಸಿರುವ ವಿಚಾರ ಪ್ರಚಾರ ಆಗುತ್ತಿದ್ದಂತೆಯೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.
ಓದಿ; ಪುತ್ತೂರು: ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಹಾಕುವಂತೆ SDPI ಕಾರ್ಯಕರ್ತರ ಪಟ್ಟು