ಕರ್ನಾಟಕ

karnataka

ETV Bharat / state

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಶೋಧ

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಲು ಬಂದಿದ್ದ ಯುವಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದೀಗ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.

Ganesh kamath
ಗಣೇಶ್ ಕಾಮತ್

By

Published : Dec 17, 2020, 4:13 PM IST

ಮಂಗಳೂರು: ಇಲ್ಲಿನ ಕಾರ್ ಸ್ಟ್ರೀಟ್​ನ ನ್ಯೂ ಚಿತ್ರ ಸಿನಿಮಾ ಮಂದಿರ ಬಳಿಯ ಚೆಕ್ ಪೋಸ್ಟ್​​ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡದ ಮೂಲಕ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ.

ಸಿಸಿಟಿವಿ ದೃಶ್ಯಾವಳಿ

ಆರೋಪಿಗಳಿಬ್ಬರು ಪೊಲೀಸ್ ಹೆಡ್ ಕಾನ್ಸ್​​ಟೇಬಲ್​ ಮೇಲೆ ಹಲ್ಲೆ‌ ಮಾಡಲು ಬಂದಿರುವ ದೃಶ್ಯ ಕೂಡ ಸಿಸಿಟಿವಿಯಲ್ಲಿ ದಾಖಲಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದರು.

ಕಳೆದ ವರ್ಷ ಡಿಸೆಂಬರ್ 19ರಂದು ಸಿಎಎ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಗೋಲಿಬಾರ್ ನಡೆದಿರುವುದನ್ನು ವಿರೋಧಿಸಿ ಈ ಹಲ್ಲೆ ನಡೆದಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಡೆದಿರುವ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಘಟನೆಗೆ ಕಾರಣ ಏನು ಎಂಬುದು ಆರೋಪಿಗಳ ಬಂಧನದ ಬಳಿಕ ತಿಳಿಯಲಿದೆ ಎಂದರು.

ಓದಿ...ಮಾನಸಿಕ ಖಿನ್ನತೆ: ಅಳದಂಗಡಿಯ ಯುವಕ ಆತ್ಮಹತ್ಯೆಗೆ ಶರಣು

ABOUT THE AUTHOR

...view details