ಮಂಗಳೂರು: ನಗರದ ಬೆಂದೂರ್ ವೆಲ್ ಸೈಂಟ್ ಆ್ಯಗ್ನೇಸ್ ಕಾಲೇಜು ಸಮೀಪ ನಡೆದ ಮಹಿಳೆಯ ದರೋಡೆ ಪ್ರಕರಣವು ಅಣಕು ಕಾರ್ಯಾಚರಣೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಸ್ಪಷ್ಟನೆ ನೀಡಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಎಷ್ಟು ಎಚ್ಚರಿಕೆಯಿಂದ ಇದ್ದಾರೆ ಎಂದು ಪರೀಕ್ಷೆ ಮಾಡಲು ಈ ಅಣಕು ಕಾರ್ಯಾಚರಣೆ ಮಾಡಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಯಾವುದೇ ಮಾಹಿತಿ ಇರಲಿಲ್ಲ. ಇಡೀ ಪ್ರಕರಣದಲ್ಲಿ ಮಹಿಳೆಯು ತಕ್ಷಣ ಪ್ರತಿ ದಾಳಿಯನ್ನೊಡ್ಡಿದ್ದಾರೆ. ಅಲ್ಲದೆ ಸಾರ್ವಜನಿಕರು ತಕ್ಷಣ ಸ್ಪಂದಿಸಿದ್ದು, ಘಟನೆ ನಡೆದ 3-4 ನಿಮಿಷದೊಳಗೆ 112ಗೆ ಕರೆ ಮಾಡಿ ತಿಳಿಸಿದ್ದಾರೆ.