ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವ ಕಾರ್ಯ ನಡೆದಿಲ್ಲ: ಎನ್.ಶಶಿಕುಮಾರ್ - ಮುಸ್ಲಿಂ ಸಂಘಟನೆಗಳ ಬಂದ್​

ಸ್ವಯಂ ಪ್ರೇರಿತವಾಗಿ ಬಂದ್​ಗೆ ಬೆಂಬಲ ಸೂಚಿಸಿ ಕೆಲ ವ್ಯಾಪಾರಿಗಳು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಅದನ್ನು ಹೊರತುಪಡಿಸಿ ಮಂಗಳೂರಿನಲ್ಲಿ ಜನ ಜೀವನ ಸಾಮಾನ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.

ಎನ್.ಶಶಿಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

By

Published : Mar 17, 2022, 2:24 PM IST

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒತ್ತಾಯ ಪೂರ್ವಕವಾಗಿ ಅಂಗಡಿ-ಮುಂಗಟ್ಟು, ವಾಹನ ಸಂಚಾರ, ವ್ಯಾಪಾರ-ವಹಿವಾಟು, ಶಾಲಾ ಕಾಲೇಜುಗಳನ್ನು ಬಂದ್ ಮಾಡಿಸುವ ಕಾರ್ಯ ನಡೆದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂಪ್ರೇರಿತವಾಗಿ ಬಂದ್​ಗೆ ಬೆಂಬಲ ಸೂಚಿಸಿ ಕೆಲ ವ್ಯಾಪಾರಿಗಳು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಅದೇ ರೀತಿ ಕೆಲವು ಸಿಟಿ ಬಸ್​ಗಳು, ಖಾಸಗಿ ವಾಹನಗಳು ಸಂಚಾರ ನಡೆಸಿಲ್ಲ. ಅದನ್ನು ಹೊರತುಪಡಿಸಿ ಜನ ಜೀವನ ಸಾಮಾನ್ಯವಾಗಿದೆ. ಪ್ರತಿ ದಿನದಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಇಂದು ಬಂದ್​ಗೆ ಕರೆ ನೀಡಿದ್ದವು. ಹೀಗಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮಪ್ರದೇಶಗಳಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಪಂಜಾಬ್ ಇತಿಹಾಸದಲ್ಲೇ ಯಾರೂ ತೆಗೆದುಕೊಂಡಿರದ ನಿರ್ಧಾರ ತೆಗೆದುಕೊಳ್ಳುತ್ತೇನೆ: ಪಂಜಾಬ್ ಸಿಎಂ ಟ್ವೀಟ್

ABOUT THE AUTHOR

...view details