ಮಂಗಳೂರು:ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು(ಪೋಕ್ಸೋ) ಅಪರಾಧಿ ಪೊಲೀಸ್ ಕಾನ್ಸ್ಟೇಬಲ್ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದ ಪ್ರವೀಣ್ ಸಾಲ್ಯಾನ್ (35) ಶಿಕ್ಷೆಗೊಳಗಾದ ಅಪರಾಧಿ. ಈತ ಬಜಪೆ ಸಿದ್ಧಾರ್ಥನಗರ ನಿವಾಸಿಯಾಗಿದ್ದಾನೆ.
2015ರ ಫೆ. 16ರಂದು ಪ್ರವೀಣ್ ಸಾಲ್ಯಾನ್ ಬಾಲಕಿಯನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು, ತಾನು ಪ್ರೀತಿಸುವುದಾಗಿ ನಾಟಕವಾಡಿ ಬಳಿಕ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣದ ಮೂಲಕ ನಿರಂತರ ಸಂಪರ್ಕದಲ್ಲಿದ್ದ. ಬಳಿಕ ಆರೋಪಿಯು ತನ್ನ ಖಾಸಗಿ ಅಂಗದ ಫೋಟೋಗಳನ್ನು ಬಾಲಕಿಗೆ ಕಳುಹಿಸಿದ್ದಲ್ಲದೆ, ಆಕೆಯ ಜೊತೆಗೆ ಅಶ್ಲೀಲ ಸಂಭಾಷಣೆ ನಡೆಸುತ್ತಿದ್ದ. ಬಳಿಕ ಆಕೆಯ ಮುಗ್ಧತೆಯನ್ನೇ ದುರುಪಯೋಗಪಡಿಸಿಕೊಂಡ ಆರೋಪಿ ಅಪ್ರಾಪ್ತೆ ಬಳಿ 1 ಲಕ್ಷ ರೂ. ಹಣ ಅಥವಾ ಚಿನ್ನ ನೀಡಬೇಕೆಂದು ಬೇಡಿಕೆ ಇಟ್ಟಿದ್ದ. ಇದರಿಂದ ನೊಂದ ಬಾಲಕಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.