ಕರ್ನಾಟಕ

karnataka

ETV Bharat / state

ಬಂಟ್ವಾಳ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ: ಐವರು ಪೊಲೀಸ್ ವಶಕ್ಕೆ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ನಡೆದಿರುವ ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತೆಯ ಪರಿಚಯಸ್ಥ ಸೇರಿ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

http://10.10.50.85//karnataka/09-October-2021/kn-mng-bantwal-02-rape-photo-kac10019_09102021174843_0910f_1633781923_704.jpg
ನಾಲ್ವರು ಪೊಲೀಸ್ ವಶಕ್ಕೆ

By

Published : Oct 9, 2021, 6:47 PM IST

ಬಂಟ್ವಾಳ/ದಕ್ಷಿಣ ಕನ್ನಡ: ಶುಕ್ರವಾರ ನಡೆದ ಘಟನೆಯೊಂದರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರಲ್ಲಿ ಅಪ್ರಾಪ್ತ ವಯಸ್ಕ 16ರ ಹರೆಯದ ಬಾಲಕಿಯೊಬ್ಬಳನ್ನು ಪರಿಚಿತನೂ ಒಳಗೊಂಡಿದ್ದ ತಂಡ ಅಪಹರಿಸಿ, ಆಕೆಯನ್ನು ಕೊಠಡಿಯೊಂದರಲ್ಲಿ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದೆ. ಇದರನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ, ಬೆದರಿಕೆ ಪ್ರಕರಣ ದಾಖಲಾಗಿದೆ.

ಘಟನೆಯ ಕುರಿತ ದೂರಿಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಬಾಲಕಿಗೆ ಪರಿಚಿತ ಶರತ್ ಶೆಟ್ಟಿ ಮತ್ತು ಇತರ ನಾಲ್ವರು ಎಂದು ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣೆಗೆ ಘಟನೆಯ ಸಂಬಂಧ ಎಸ್​ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿದ್ದು, ಬಂಟ್ವಾಳ ಎ.ಎಸ್.ಪಿ.ಶಿವಾಂಶು ರಜಪೂತ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡದೊಂದಿಗೆ ಸಂತ್ರಸ್ತೆಯ ಮತ್ತು ಶಂಕಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬಂಟ್ವಾಳದಲ್ಲಿ ಬಾಲಕಿ ಅಪಹರಿಸಿ ಗ್ಯಾಂಗ್​ರೇಪ್​ ಆರೋಪ; ಇಬ್ಬರು ಪೊಲೀಸರ ವಶಕ್ಕೆ

ಈ ಕುರಿತು ಪ್ರತಿಕ್ರಿಯೆ ನೀಡಿದ ಎಸ್​ಪಿ ಋಷಿಕೇಶ್ ಸೋನಾವಣೆ, ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಎಫ್.ಐ.ಆರ್. ಮಾಡಲಾದಂತೆ ಐವರು ಆರೋಪಿಗಳು ಘಟನೆಯಲ್ಲಿ ಕಂಡುಬಂದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಸಂತ್ರಸ್ತೆ ಹುಡುಗಿಯನ್ನು ವಿಚಾರಣೆ ನಡೆಸಿದಾಗ, ಅಕ್ಟೋಬರ್ 8ರಂದು ಬೆಳಗ್ಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ಬಿಳಿ ಕಾರಿನಲ್ಲಿ ಬಂದ ಪರಿಚಿತ ಆರೋಪಿ ಇನ್ನಿತರರೊಂದಿಗೆ ತನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿರುವುದಾಗಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details