ಮಂಗಳೂರು(ದಕ್ಷಿಣ ಕನ್ನಡ):ಖಾಸಗಿ ಬಸ್‌ಗಳ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಆರೋಪದ ಮೇರೆಗೆ ಮಂಗಳೂರು ನಗರ ಸಂಚಾರ ಪೊಲೀಸರು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ 123 ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಂಗಳವಾರ(29)ದಂದು ಮಧ್ಯಾಹ್ನ ನಗರದ ನಂತೂರು ಸರ್ಕಲ್ ಬಳಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಫುಟ್‌ಬೋರ್ಡ್‌ನಲ್ಲಿ ನಿಂತಿದ್ದ ಕಂಡೆಕ್ಟರ್ ಡಾಮಾರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದರು.
ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಬಸ್ ಮಾಲೀಕರ ಜೊತೆ ಮಾತುಕತೆ ನಡೆಸಿ ಬಸ್ನಲ್ಲಿ ಬಾಗಿಲು ಅಳವಡಿಸುವಂತೆ ಕೆಲವೊಂದು ಸೂಚನೆಗಳನ್ನು ನೀಡಿ ಅವುಗಳ ಪಾಲನೆಗೆ ನಿರ್ದೇಶನ ನೀಡಿದ್ದರು. ಗುರುವಾರ ಬಸ್ ಮಾಲೀಕರ ಜತೆ ಎರಡನೇ ಹಂತದ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತರು ಬಸ್‌ಗಳಿಗೆ ಬಾಗಿಲು ಅಳವಡಿಸಲು ಸೂಚಿಸಿದ್ದಾರೆ.
ಇದಕ್ಕೆ ಬಸ್ ಮಾಲೀಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ಅಥವಾ ಸಿಬ್ಬಂದಿ ವರ್ಗವು ನೇತಾಡದಂತೆ ಸೂಚನೆ ನೀಡಲಾಗುವುದು. ಒಂದು ವೇಳೆ, ಈ ಸೂಚನೆ ಮೀರಿ ನಡೆದರೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗುವುದಿಲ್ಲ. ಅಲ್ಲದೇ ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಬಸ್ ಮಾಲೀಕರ ಸಂಘದ ಮುಖಂಡರು ಭರವಸೆ ನೀಡಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಗಾಂಜಾ ಸೇವನೆ -ಪ್ರಕರಣ ದಾಖಲು:ಗಾಂಜಾ ಸೇವನೆ ಮಾಡಿದ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಲೇಡಿಹಿಲ್ನ ಹೊಟೇಲ್ ಸಿ ವ್ಯೂವ್ ಬಳಿ ಅಮಲಿನಲ್ಲಿದ್ದಂತೆ ಕಂಡು ಬಂದ ಯುವಕನನ್ನು ವಿಚಾರಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ತಿಳಿದು ಬಂದಿದೆ. ನಗರದ ಕೊಂಚಾಡಿಯ ದೇರೆಬೈಲ್ ಲ್ಯಾಂಡ್ ಲಿಂಕ್ಸ್ ಟೌನ್ ಶೀಪ್ನ ಉದಿತ್ ಎಂಬಾತ ಗಾಂಜಾ ಸೇವನೆ ಮಾಡಿರುವುದಾಗಿ ಕಂಡುಬಂದಿದೆ. ಈತನನ್ನು ಏ.ಜೆ ಆಸ್ಪತ್ರೆಯ ವೈದ್ಯರ ಮುಂದೆ ಹಾಜರುಪಡಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ.
ಪಾರ್ಟ್ ಟೈಂ ಉದ್ಯೋಗದ ಆಮಿಷ- 91 ಸಾವಿರ ರೂ ವಂಚನೆ:ಪಾರ್ಟ್ ಟೈಂ ಉದ್ಯೋಗದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ವಂಚಕರು ರೂ 91 ಸಾವಿರ ಪಂಗನಾಮ ಹಾಕಿದ್ದಾರೆ. ವ್ಯಕ್ತಿಯೊಬ್ಬರ ಮೊಬೈಲ್ ನಂಬರ್ಗೆ ವಾಟ್ಸಾಪ್ನಲ್ಲಿ 956796---- ನಂಬರ್ನಿಂದ Mall-Groupon ಎಂಬ ವೆಬ್ ಸೈಟ್ನಲ್ಲಿ ಪಾರ್ಟ್ ಟೈಮ್ ಉದ್ಯೋಗದ ಬಗ್ಗೆ ಮಾಹಿತಿ ಬಂದಿತ್ತು.
ಅದರಲ್ಲಿ ಟಾಸ್ಕ್ಗಳನ್ನು ಪೂರ್ತಿಗೊಳಿಸಿ ಹಣವನ್ನು ಪಡೆಯುವ ಬಗ್ಗೆ ತಿಳಿಸಿ, ನಂತರ Telegram app ನಲ್ಲಿ Meera radish ಎಂಬ ಹೆಸರಿನ app Id- Info-@Arnold352 ನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಅದರಂತೆ ಆ ವ್ಯಕ್ತಿ Telegram App ನಲ್ಲಿ 9 ಆರ್ಡರ್ನ ಟಾಸ್ಕ್ನ್ನು ಪೂರ್ತಿಗೊಳಿಸುವ ಬಗ್ಗೆ ಹಂತ ಹಂತವಾಗಿ 91,996/-ರೂ. ಹಣವನ್ನು ಜಮೆ ಮಾಡಿದ್ದಾರೆ. ನಂತರ ವಂಚನೆಗೊಳಗಾಗಿರುವುದು ತಿಳಿದು ಬಂದು ಮೂಡಬಿದಿರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಜಿಲ್ಲಾಮಟ್ಟದ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ