ಮಂಗಳೂರು (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿಯೀಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಯಿತು.
ಎಡಿಜಿಪಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಡಿಸಿಪಿ ಅಂಶುಕುಮಾರ್, ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಮತ್ತು ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು ಭಾಗಿಯಾಗಿದ್ದರು.