ಮಂಗಳೂರು: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿ, ಆರು ವಾಹನಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ.
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ : 11 ಮಂದಿಯ ಬಂಧನ - Police raid on gamblers
ಕಲ್ಲಬೆಟ್ಟು ಗ್ರಾಮದ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಮೂಡು ಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ : 11 ಮಂದಿಯ ಬಂಧನ
ಕಲ್ಲಬೆಟ್ಟು ಗ್ರಾಮದ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದ್ದರು. ಈ ಸಂದರ್ಭ ಜೂಜಾಟದಲ್ಲಿ ನಿರತರವಾಗಿ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೆ ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಆರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.