ಕರ್ನಾಟಕ

karnataka

ETV Bharat / state

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ: ಓರ್ವ ಪೋಲಿಸ್ ವಶಕ್ಕೆ - ಓರ್ವ ಪೋಲಿಸ್ ವಶಕ್ಕೆ, ಇನ್ನೋರ್ವ ಪರಾರಿ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು 23 ಕೆ.ಜಿ. ಮಾಂಸ ವಶಪಡಿಸಿಕೊಂಡೊದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ.

chicken shop
chicken shop

By

Published : May 23, 2020, 8:15 AM IST

ರಾಮಕುಂಜ (ದ.ಕ): ಕಡಬ ತಾಲೂಕಿನ ರಾಮಕುಂಜ ಗ್ರಾಮದ ನೀರಾಜೆ ಎಂಬ ಮನೆಯೊಂದರಲ್ಲಿ ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್​ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಓರ್ವ ಪರಾರಿಯಾಗಿದ್ದಾನೆ. 23 ಕೆ.ಜಿ. ಮಾಂಸ ವಶಪಡಿಸಿಕೊಂಡ ಪೋಲಿಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಚಿಕನ್ ಸೆಂಟರ್ ಹಾಗೂ ಮನೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ

ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್​ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಡಬ ಪೋಲಿಸರು ಚಿಕನ್ ಸೆಂಟರ್​ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಮಾಲೀಕ, ರಾಮಕುಂಜ ನಿವಾಸಿ ಮಹಮ್ಮದ್ ಎಂಬವವರನ್ನು ವಶಕ್ಕೆ ಪಡೆದು, 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ನೀರಾಜೆ ಎಂಬಲ್ಲಿರುವ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 14 ಕೆ.ಜಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.

ABOUT THE AUTHOR

...view details