ಮಂಗಳೂರು:ಪುತ್ತೂರು ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಮುಂದೆ ಇಂತಹ ಘಟನೆ ತಪ್ಪಿಸಲು ಪೊಲೀಸರು ಉಪ್ಪಿನಂಗಡಿ ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್ಗಳನ್ನ ವಶಪಡಿಸಿಕೊಂಡರು.
ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ; ಕಾಲೇಜಿಗೆ ದಾಳಿ ಮಾಡಿ, ಮೊಬೈಲ್ಗಳನ್ನ ವಶಕ್ಕೆ ಪಡೆದ ಪೊಲೀಸರು! - gang rape
ಗ್ಯಾಂಗ್ ರೇಪ್ ಪ್ರಕರಣ ಮತ್ತು ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಇಂತಹ ಘಟನೆ ಮರುಕಳಿಸಬಾರದೆಂಬ ಕಾರಣಕ್ಕೆ ಪೊಲೀಸರು ಕಾಲೇಜಿಗೆ ದಾಳಿ ಮಾಡಿ ವಿದ್ಯಾರ್ಥಿಗಳ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
police
ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದೆಂದು ಇರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಪೊಲೀಸರು ಕಾಲೇಜಿಗೆ ದಾಳಿ ಮಾಡ, ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಉಪ್ಪಿನಂಗಡಿ ಎಸ್ ಐ ನಂದಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕಾಲೇಜು ವಿದ್ಯಾರ್ಥಿಗಳ 24 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಯಿತು. ವಶಪಡಿಸಿಕೊಂಡ ಮೊಬೈಲ್ ಗಳನ್ನು ಪೋಷಕರೊಂದಿಗೆ ಠಾಣೆಗೆ ಬಂದು ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ.