ಮಂಗಳೂರು:ಎರಡು ಡೋಸ್ ಲಸಿಕೆ ಪಡೆದಿದ್ದ ಮಂಗಳೂರಿನ ಪೊಲೀಸ್ ಸಿಬ್ಬಂದಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ.
ಮಂಗಳೂರಿನಲ್ಲಿ ಲಸಿಕೆ ಪಡೆದಿದ್ದ ಪೊಲೀಸ್ ಸಿಬ್ಬಂದಿ ಕೊರೊನಾಗೆ ಬಲಿ - ಮಂಗಳೂರು ಪೊಲೀಸ್ ಸಿಬ್ಬಂದಿ ಸಾವು
ಮಂಗಳೂರು ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಎರಡು ಡೋಸ್ ಲಸಿಕೆ ಪಡೆದಿದ್ದರು ಎಂದು ತಿಳಿದುಬಂದಿದೆ.
ಪೊಲೀಸ್ ಸಿಬ್ಬಂದಿ ಕೊರೊನಾಗೆ ಬಲಿ
ಮಂಗಳೂರು ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ ಶಿಂಗೆ ಮೃತಪಟ್ಟವರು. ಮೂಲತ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇವರು ಮಾಜಿ ಸೈನಿಕರು ಆಗಿದ್ದಾರೆ.
ಕೊರೊನಾ ಪಾಸಿಟಿವ್ ಬಂದಿದ್ದ ಇವರು ಕಳೆದ ಎರಡು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಅಂಗಾಂಗ ವೈಫಲ್ಯಗೊಂಡು ಬಳಲುತ್ತಿದ್ದ ಇವರು ಎರಡು ಡೋಸ್ ಲಸಿಕೆಯನ್ನು ಪಡೆದಿದ್ದರು.