ಕರ್ನಾಟಕ

karnataka

By

Published : May 30, 2021, 8:54 AM IST

ETV Bharat / state

ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೋವಿಡ್​​ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು: ಸಚಿವ ಎಸ್.ಅಂಗಾರ

ಕೊರೊನಾ ಪಾಸಿಟಿವ್ ಆದ ವ್ಯಕ್ತಿಯೋರ್ವ ತನ್ನ ಮನೆಯವರ ಬಗ್ಗೆಯೂ ಕಾಳಜಿ ಇಲ್ಲದೇ ವರ್ತಿಸುವುದರಿಂದ ಇಡೀ ಕುಟುಂಬಕ್ಕೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಆದುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೊವಿಡ್ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಸಚಿವ ಎಸ್. ಅಂಗಾರ ಹೇಳಿದರು.

Minister S Angara
ಸಚಿವ ಎಸ್. ಅಂಗಾರ

ಕಡಬ:ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೋವಿಡ್ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗುವುದು. ಇದರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯ ಎಂದು ಕರ್ನಾಟಕ ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಹೇಳಿದರು.

ಸಚಿವ ಎಸ್. ಅಂಗಾರ ಪ್ರತಿಕ್ರಿಯೆ

ಶನಿವಾರ ಕಡಬದ ಅಂಬೇಡ್ಕರ್ ಸಭಾ ಭವನದಲ್ಲಿ ನಡೆದ ತಾಲೂಕಿನ ಅಧಿಕಾರಿಗಳ ಸಭೆಯ ನಂತರದಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ದಿನಂ ಪ್ರತಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸ್ವತಃ ಕೊರೊನಾ ಪಾಸಿಟಿವ್ ಆದ ವ್ಯಕ್ತಿಯೋರ್ವ ತನ್ನ ಮನೆಯವರ ಬಗ್ಗೆಯೂ ಕಾಳಜಿ ಇಲ್ಲದೇ ವರ್ತಿಸುವುದರಿಂದ ಇಡೀ ಕುಟುಂಬಕ್ಕೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಈ ವ್ಯಕ್ತಿಗಳ ಕುಟುಂಬಸ್ಥರೂ ಯಾವುದೇ ಸುರಕ್ಷತೆ ಬಗ್ಗೆ ಗಮನ ನೀಡದೆ ಪೇಟೆಗಳಲ್ಲಿ ತಿರುಗಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕೋವಿಡ್ ಸೆಂಟರ್​​ಗಳಿಗೆ ದಾಖಲಿಸದೆ ಬೇರೆ ವಿಧಿ ಇಲ್ಲ. ಈ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹಲವು ಆಸ್ಪತ್ರೆಗಳಲ್ಲಿ ಔಷಧೀಯ ಲಭ್ಯತೆಯ ಕೊರತೆ ಬಗ್ಗೆ, ಈ ಹಿಂದಿನ ವರ್ಷಗಳಲ್ಲಿ ಕೆಲವು ಇಲಾಖಾಧಿಕಾರಿಗಳು ಮಾಡುತ್ತಿದ್ದ ಮುಂಜಾಗ್ರತಾ ಕ್ರಮಗಳನ್ನು ಈಗ ಕೈಗೊಳ್ಳದ ಬಗ್ಗೆ, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳು ಹೊರಗಡೆ ತಿರುಗಾಡುತ್ತಿದ್ದರೂ ಅಂತವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳದ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಂಗಾರ ತಿಳಿಸಿದರು.

ಇದೇ ವೇಳೆ ಎಲ್ಲಾ ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್​​ಗಳನ್ನು ಸಚಿವರು ಹಸ್ತಾಂತರಿಸಿದರು.

ABOUT THE AUTHOR

...view details