ಮಂಗಳೂರು:ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ಎನ್ಆರ್ಸಿಯಿಂದಾಗಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತನಿಗೆ ವಿದೇಶದಿಂದ ಜೀವಬೆದರಿಕೆ ಕರೆ ಬಂದಿದೆ ಎಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತ ಮುಹಮ್ಮದ್ ಅಸ್ಗರ್ ಅವರು ಸಿಎಎ ಮತ್ತು ಎನ್‌ಆರ್‌ಸಿಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ಹೇಳಿಕೆ ವಿರುದ್ಧ ವಿದೇಶದಿಂದ ವ್ಯಕ್ತಿಯೊಬ್ಬ ಕರೆ ಮಾಡಿ ನಿಂದಿಸಿದ್ದಾನೆ. ಬಳಿಕ ವಾಟ್ಸಪ್‌ನಲ್ಲಿ ವಾಯ್ಸ್ ಮೆಸೇಜ್ ಮೂಲಕವೂ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮುಹಮ್ಮದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.