ಬೆಳ್ತಂಗಡಿ:ಕಳೆದ ಎರಡು ದಿನದಿಂದ ಸುರಿಯುತ್ತಿರುವ ಭಾರಿ ಗಾಳಿ-ಮಳೆಗೆ ತಾಲೂಕಿನ ಹಲವಡೆ ಅವಘಡ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಸಮೀಪ ಮಳೆ ಗಾಳಿಗೆ ವಿದ್ಯುತ್ ಕಂಬವೊಂದು ಚಲಿಸುತ್ತಿದ್ದ ಪಿಕಪ್ ವಾಹನದ ಬಿದ್ದ ಪರಿಣಾಮ ವಾಹನ ಜಖಂಗೊಂಡಿದೆ.
ಬೆಳ್ತಂಗಡಿ: ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್ ಕಂಬ - Mangaluru latest news
ರಸ್ತೆ ಅಗಲೀಕರಣವಾಗುವ ವೇಳೆ ಈ ವಿದ್ಯುತ್ ಕಂಬಗಳನ್ನು ಬೇರೆಡೆಗೆ ವರ್ಗಾಯಿಸಲು ಆದೇಶ ಮಾಡಿದ್ದರೂ ಕೂಡ ಅವುಗಳನ್ನು ಸರಿಯಾದ ಸ್ಥಳದಲ್ಲಿ ಹಾಕದೆ ಅಲ್ಲಿಯೇ ಬಿಟ್ಟಿದ್ದಾರೆ. ಪರಿಣಾಮವಾಗಿ ಕಂಬಗಳು ಬೀಳುತ್ತಿವೆ ಎಂದು ಪಡಂಗಡಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಅವಘಡದಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವಿದ್ಯುತ್ ಕಂಬಗಳನ್ನು ಎಲ್ಲೆಂದರಲ್ಲಿ ಹಾಕಿದ್ದಾರೆ. ಇನ್ನು ರಸ್ತೆ ಅಗಲೀಕರಣವಾಗುವ ವೇಳೆ ಈ ವಿದ್ಯುತ್ ಕಂಬಗಳನ್ನು ಬೇರೆಡೆಗೆ ವರ್ಗಾಯಿಸಲು ಆದೇಶ ಮಾಡಿದ್ದರೂ ಕೂಡ ಅವುಗಳನ್ನು ಸರಿಯಾದ ಸ್ಥಳದಲ್ಲಿ ಹಾಕದೆ ಅಲ್ಲಿಯೇ ಬಿಟ್ಟಿದ್ದಾರೆ. ಪರಿಣಾಮವಾಗಿ ಕಂಬಗಳ ಬುಡಗಳಲ್ಲಿ ನೀರು ನಿಂತು, ಮಣ್ಣಿನ ಹಿಡಿತ ಕಳಕೊಂಡಿದ್ದರಿಂದ ಕಂಬಗಳು ಬೀಳುತ್ತಿದೆ.
ಇದೇ ರೀತಿ ಸಾಕಷ್ಟು ಕಂಬಗಳು ಬೀಳುವ ಸ್ಥಿತಿಯಲ್ಲಿವೆ. ಪರಿಸರದ ನಿವಾಸಿಗಳು ಇದರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದು, ಇನ್ನಾದರೂ ಮೆಸ್ಕಾಂ ಅಧಿಕಾರಿಗಳು ಎಚ್ಚೆತ್ತು ಅಪಾಯಕಾರಿ ವಿದ್ಯುತ್ ಕಂಬಗಳನ್ನು ಸರಿಯಾದ ಸ್ಥಳಗಳಲ್ಲಿ ಸರಿಯಾದ ಕ್ರಮದಲ್ಲಿ ಅಳವಡಿಸಬೇಕು ಎನ್ನುತ್ತಾರೆ ಸ್ಥಳೀಯರು.