ಕರ್ನಾಟಕ

karnataka

ETV Bharat / state

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ಎನ್‌ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಹಾಗು ಸ್ಥಳೀಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ)ಗೆ ವಹಿಸಿ ಆದೇಶಿಸಿದೆ.

ಪ್ರವೀಣ್ ನೆಟ್ಟಾರ್
ಪ್ರವೀಣ್ ನೆಟ್ಟಾರ್

By

Published : Aug 5, 2022, 7:07 PM IST

ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ.

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್‌ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ ಕಳುಹಿಸಿಕೊಡಲಾಗಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಿದ ಕೇಂದ್ರ ಗೃಹ ಇಲಾಖೆ

ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ- 2008 ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಬಂದಿದೆ. ಅಪರಾಧದ ಗಂಭೀರತೆ ಮತ್ತು ಅದರ ಅಂತಾರಾಜ್ಯ ಪರಿಣಾಮಗಳನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಪ್ರಕಾರ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯ ಮಾಸ್ತಿಕಟ್ಟೆ ಎಂಬಲ್ಲಿ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಎಂಬ ಕೋಳಿ ಅಂಗಡಿ ನಡೆಸುತ್ತಿದ್ದರು. ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‌ನಲ್ಲಿ​ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದರು.

ಇದನ್ನೂ ಓದಿ:'ಸಿದ್ದರಾಮಯ್ಯ ಮೇಲಿನ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ, ಅವು ಕಾಂಗ್ರೆಸ್ ಮತಗಳಲ್ಲ'

ABOUT THE AUTHOR

...view details