ಕರ್ನಾಟಕ

karnataka

ETV Bharat / state

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ತಮ್ಮನಿಂದ ಕೊಲೆ ಬೆದರಿಕೆ ಆರೋಪ: ಬೆಳ್ಳಾರೆ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ಸಹೋದರನಿಂದ ಬೆದರಿಕೆ ಆರೋಪ.

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ತಮ್ಮನಿಂದ ಬೆದರಿಕೆ ಆರೋಪ
ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ತಮ್ಮನಿಂದ ಬೆದರಿಕೆ ಆರೋಪ

By

Published : Sep 10, 2022, 9:16 PM IST

ಸುಳ್ಯ (ದಕ್ಷಿಣ ಕನ್ನಡ): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇದೀಗ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಜರುಗಿದೆ ಎಂದು ವರದಿಯಾಗಿದೆ.

ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತ ನೋರ್ವನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಪ್ರತಿಭಟನೆ ನಡೆಸಿದರು.

ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಕಾಂಪ್ಲೆಕ್ಸ್ ಒಂದರ ಮ್ಯಾನೇಜರ್ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಶಫೀಕ್ ಸಹೋದರ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಶನಿವಾರ ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿಯೂ, ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗ್ಗೆ ಪ್ರಶಾಂತ್ ಬಳಿ ಆಡಿಯೋ ರೆಕಾರ್ಡ್ ಇದೆ ಎನ್ನಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ತಮ್ಮನಿಂದ ಬೆದರಿಕೆ ಆರೋಪ

ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ತೆರಳಿರುವುದಾಗಿ ಹೇಳಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಬೆಳ್ಳಾರೆಯ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಸಫ್ರೀದ್​​ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿದರು. ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

(ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮ.. ಪ್ರವೀಣ್ ನೆಟ್ಟಾರು ಮನೆಯವರಿಗೆ ಉದ್ಯೋಗ: ಬೊಮ್ಮಾಯಿ ಘೋಷಣೆ)

ABOUT THE AUTHOR

...view details