ಕರ್ನಾಟಕ

karnataka

ETV Bharat / state

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಏಳನೇ ಆರೋಪಿ ಬಂಧನ

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಯೋಜನೆ ರೂಪಿಸಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ.

Praveen Nettaru murder
ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು

By

Published : Aug 9, 2022, 7:02 PM IST

ಸುಳ್ಯ(ದಕ್ಷಿಣ ಕನ್ನಡ):ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟಾರೆ ಏಳು ಆರೋಪಿಗಳನ್ನು ಇಲ್ಲಿಯತನಕ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುಳ್ಯ ಟೌನ್​ನ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬುವರ ಪುತ್ರ ಅಬ್ದುಲ್ ಕಬೀರ್ ಸಿ.ಎ (33) ಎಂದು ಗುರುತಿಸಲಾಗಿದೆ.

ಹತ್ಯೆಗೆ ಯೋಜನೆ ರೂಪಿಸಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು ಏಳು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು

ABOUT THE AUTHOR

...view details