ಮಂಗಳೂರು: ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರದೇಶದಲ್ಲಿ ಪ್ರವೇಶ ನಿರ್ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ. ಪ್ರಮೋದ್ ಮುತಾಲಿಕ್ ಮೃತ ಪ್ರವೀಣ್ ಮನೆಗೆ ಭೇಟಿ ನೀಡುವುದಾಗಿ ಮಾಹಿತಿ ತಿಳಿದು ಬಂದ ಹಿನ್ನೆಲೆ ಈ ನಿಷೇಧ ಜಾರಿ ಮಾಡಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮೋದ್ ಮುತಾಲಿಕ್ಗೆ ದ.ಕ ಜಿಲ್ಲಾ ಪ್ರವೇಶ ನಿಷೇಧ - Etv bharat kannada
ಮೃತ ಪ್ರವೀಣ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ ನೀಡುವುದಾಗಿ ಮಾಹಿತಿ ತಿಳಿದು ಬಂದ ಹಿನ್ನೆಲೆ, ದ.ಕ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
![ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮೋದ್ ಮುತಾಲಿಕ್ಗೆ ದ.ಕ ಜಿಲ್ಲಾ ಪ್ರವೇಶ ನಿಷೇಧ Pramod Muthalik banned from entering Dakshina kannada district](https://etvbharatimages.akamaized.net/etvbharat/prod-images/768-512-15951079-thumbnail-3x2-bin.jpg)
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್ ಭೇಟಿ ಮಾಡಿದ ಸ್ಥಳದಲ್ಲಿ ಉದ್ರೇಕಕಾರಿ ಭಾಷಣ ಮಾಡಿ, ಕೋಮು ಸೌಹಾರ್ದತೆ ಹದಗೆಡಿಸಿದ ಪ್ರಕರಣಗಳು ನಡೆದಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಇಂದು ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರವೇಶ ನಿರ್ಬಂಧಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.