ಮಂಗಳೂರು:ಇಡೀ ರಾಜ್ಯಾದ್ಯಂತ ಕೊರೊನಾ ವೈರಸ್ನಿಂದ ಆತಂಕ ಸೃಷ್ಟಿಯಾಗಿದ್ದು, ಸಿಎಂ ಯಡಿಯೂರಪ್ಪ ಹಾಗೂ ಪಿಎಂ ಮೋದಿಯವರ ಮುನ್ಸೂಚನೆ ಮೇರೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.
ಕೊರೊನಾ ವೈರಸ್ ಆತಂಕ: ರಾಜ್ಯದಲ್ಲಿ ಆರೋಗ್ಯ ಇಲಾಖೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳೇನು? - Corona virus threat
ರಾಜ್ಯಾದ್ಯಂತ ಕೊರೊನಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಸಿಎಂ ಯಡಿಯೂರಪ್ಪ ಹಾಗೂ ಪಿಎಂ ಮೋದಿಯವರ ಮುನ್ಸೂಚನೆ ಮೇರೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂದರು ಪ್ರದೇಶ, ವಿಮಾನ ನಿಲ್ದಾಣ ಹಾಗೂ ಕೇರಳದ ವಾಹನಗಳನ್ನು ತೀವ್ರ ತಪಾಸಣೆ ಮಾಡುವ ಮೂಲಕ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಇಡೀ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 10 ಬೆಡ್ ಗಳನ್ನು ಅದಕ್ಕಾಗಿಯೇ ಮೀಸಲಿಡಲಾಗಿದೆ ಎಂದರು.
ಈಗಾಗಲೇ 52 ಮಂದಿ ಶಂಕಿತರ ರಕ್ತದ ಸ್ಯಾಂಪಲ್ ಪಡೆದು ಟೆಸ್ಟ್ ಮಾಡಲಾಗಿದ್ದು, ನೆಗೆಟಿವ್ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು, ಕೊರೊನಾ ವೈರಸ್ ಮುಂತಾದವುಗಳನ್ನು ತಡೆಯಲು ಈಗಾಗಲೇ ಮೊಬೈಲ್ ಎಲ್ಇಡಿ ವ್ಯಾನ್ ಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇಂತಹ 15 ವಾಹನಗಳು ರಾಜ್ಯಾದ್ಯಂತ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಕೊರೊನಾ ಸೋಂಕಿನ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಮುನ್ನೆಚ್ಚರಿಕೆ ವಹಿಸುವ ಕಾರ್ಯ ನಿರ್ವಹಿಸುತ್ತಿದೆ ಎಂದು ಸಚಿವರು ವಿವರಿಸಿದರು.