ಪುತ್ತೂರು: ಕೋವಿಡ್ ಮುಕ್ತ ಪುತ್ತೂರು ನಮ್ಮ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಸಮುದಾಯದ ರಕ್ಷಣೆಗಾಗಿ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ಕ್ಯಾಂಪ್‌ಗಳನ್ನು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಕೋವಿಡ್ ಸಮುದಾಯಕ್ಕೆ ಹರಡದಂತೆ ಜಾಗೃತಿ ವಹಿಸಬೇಕು: ಶಾಸಕ ಸಂಜೀವ ಮಠಂದೂರು - ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕುರಿತು ಪೂರ್ವಭಾವಿ ಸಭೆ
ಕೋವಿಡ್-19 ಸಮುದಾಯಕ್ಕೆ ಹರಡದಂತೆ ಎಲ್ಲರೂ ಜಾಗೃತಿ ವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕುರಿತು ಪೂರ್ವಭಾವಿ ಸಭೆ
ಮಂಗಳವಾರ ನಗರಸಭೆಯ ಸಭಾಭವನದಲ್ಲಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡುವ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್-19 ಸಮುದಾಯಕ್ಕೆ ಹರಡದಂತೆ ಎಲ್ಲರೂ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು, ಅಧಿಕಾರಿಗಳು, ಉದ್ಯಮಿಗಳು, ವರ್ತಕರ ಸಹಕಾರ ಅಗತ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕುರಿತು ಮಾಹಿತಿ ನೀಡಿದರು. ಉದ್ಯಮಿ ಕೃಷ್ಣನಾರಾಯಣ ಮುಳಿಯ, ನಗರಸಭೆ ಸದಸ್ಯ ಭಾಮಿ ಅಶೋಕ ಶೆಣೈ ತಮ್ಮ ತಮ್ಮ ಅಭಿಪ್ರಾಯಗಳನ್ನು ಶಾಸಕರಿಗೆ ತಿಳಿಸಿದರು.