ಕರ್ನಾಟಕ

karnataka

ETV Bharat / state

ಅರ್ಚಕರಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು - ದಕ್ಷಿಣ ಕನ್ನಡದ ಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ಪೂಜೆಗೆ ತೆರಳುತ್ತಿದ್ದ ಅರ್ಚಕರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಬಳಿಕ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್​ರವರು ಪುತ್ತೂರು ಪೊಲೀಸ್ ಉಪ ವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿದ್ದಾರೆ.

ಅರ್ಚಕರಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ
vಅರ್ಚಕರಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ

By

Published : Mar 29, 2020, 11:26 PM IST

ಸುಬ್ರಹ್ಮಣ್ಯ:ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ಪೂಜೆಗೆ ತೆರಳುತ್ತಿದ್ದ ಅರ್ಚಕರ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದದೆ.

ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ತನಿಖೆ ನಡೆಸಿರುವ ಪುತ್ತೂರು ಡಿವೈಎಸ್ಪಿ ವರದಿ ಆಧರಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಅರ್ಚಕರಾದ ಶ್ರೀನಿವಾಸ್ ಎಂಬುವರು ಶನಿವಾರ ಸಂಜೆ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ಕೀ ಸಹಿತ ತೆರಳುತ್ತಿದ್ದರು.

ಈ ಸಮಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಶಂಕರ್ ಸಂಶಿ ಎಂಬುವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಆಕ್ರೋಶ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್​ರವರು ಪುತ್ತೂರು ಪೊಲೀಸ್ ಉಪ ವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿದ್ದಾರೆ.

ABOUT THE AUTHOR

...view details