ಕರ್ನಾಟಕ

karnataka

ETV Bharat / state

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಸಿಇಓ ಡಾ. ಕುಮಾರ್ - Mangalore news

ಸರ್ಕಾರಿ ಕಟ್ಟಡಗಳು ಸೇರಿದಂತೆ ಖಾಸಗಿ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಘಟಕಗಳನ್ನು ಸ್ಥಾಪಿಸಿ, ನೀರನ್ನು ಇಂಗಿಸುವುದರಿಂದ ಅಂತರ್ಜಲ ವೃದ್ಧಿಸಲು ಸಾಧ್ಯವಾಗುತ್ತದೆ. ಇದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಡಾ. ಕುಮಾರ್ ತಿಳಿಸಿದರು.

mangalore
mangalore

By

Published : Apr 30, 2021, 12:04 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಲ ಜೀವನ್ ಮಿಷನ್ ಯೋಜನೆಯಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್‍ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಶುದ್ಧ ನೀರು ಪೂರೈಕೆಗೆ ಮುಂದಾಗಿದೆ. ಕಳೆದ ಸಾಲಿನಲ್ಲಿ ಶುದ್ಧ ಕುಡಿಯುವ ನೀರು ಗ್ರಾಮೀಣ ಭಾಗದ 53,774 ಸಾವಿರ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಕೈಗೊಳ್ಳಲು 149 ಕೋಟಿ ಮಂಜೂರಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುಸ್ಥಿರ ನೀರಿನ ಮೂಲಗಳು, ಡ್ಯಾಮ್‍ಗಳು ಹಾಗೂ ವರ್ಷಪೂರ್ತಿ ನೀರಿನ ಲಭ್ಯತೆ ಹೊಂದಿರುವ ಭಾಗಗಳನ್ನು ಗುರುತಿಸುವುದರೊಂದಿಗೆ ಹೊಸ 7 ಬಹು ಗ್ರಾಮ ಕುಡಿಯುವ ನೀರಿನ ಯೋಜನೆ 450 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡು ನಂತರ 2023-24 ನೇ ಸಾಲಿನಲ್ಲಿ 32 ಸಾವಿರ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ABOUT THE AUTHOR

...view details