ಮಂಗಳೂರು:ವ್ಯಕ್ತಿಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66ರ ಬೈಕಂಪಾಡಿಯಲ್ಲಿ ನಡೆದಿದೆ.
ಖಾಸಗಿ ಬಸ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು - manglore man died news
ವ್ಯಕ್ತಿಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66ರ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ.
ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು
ನಿವೃತ್ತ ಎನ್‌ಎಂಪಿಟಿ ಉದ್ಯೋಗಿ, ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಸುಂದರ ಸಾಲ್ಯಾನ್ (70) ಮೃತಪಟ್ಟವರಾಗಿದ್ದಾರೆ. ಸುಂದರ ಸಾಲ್ಯಾನ್ ಅವರು, ಬೈಕಂಪಾಡಿಯದಿಂದ ಕೃಷ್ಣಾಪುರದ ತಮ್ಮ ಮನೆಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದರು. ಈ ಸಂದರ್ಭ ಕೃಷ್ಣಾಪುರದತ್ತ ಅತ್ಯಂತ ವೇಗವಾಗಿ ಚಲಿಸುತ್ತಿದ್ದ ಸಿಟಿ ಬಸ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ಬಸ್ ಸುಂದರ್ ಸಾಲ್ಯಾನ್‌ರನ್ನು ಸುಮಾರು ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.