ಪುತ್ತೂರು (ದ.ಕನ್ನಡ): ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದಲ್ಲಿ ಬಡ ರೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಈ ಕೂಡಲೇ ಇಲ್ಲಿನ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಡಯಾಲಿಸಿಸ್ ಘಟಕದಲ್ಲಿ ರೋಗಿಗಳ ಬಗ್ಗೆ ನಿರ್ಲಕ್ಷ್ಯ ಆರೋಪ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯ - puttur dialysis center news
ಪುತ್ತೂರಿನ ಡಯಾಲಿಸಿಸ್ ಘಟಕಕ್ಕೆ ಬಂದ ರೋಗಿಗಳನ್ನು ಸರಿಯಾಗಿ ವಿಚಾರಿಸಿದೆ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ
ಈ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವು, ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ ಮತ್ತಿತರರು ಉಪಸ್ಥಿತರಿದ್ದರು.