ಮಂಗಳೂರು: ಸುರತ್ಕಲ್ ನಲ್ಲಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುರತ್ಕಲ್ ಸುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಸುರತ್ಕಲ್ನಲ್ಲಿ ಫಾಜಿಲ್ನನ್ನು ಹತ್ಯೆ ಮಾಡಿದ ಘಟನಾಸ್ಥಳ ಪರಿಶೀಲಿಸಿ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು. 144ಸ ಸೆಕ್ಷನ್ ಇರುವುದರಿಂದ 5 ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ ಎಂದು ಮಾಹಿತಿ ನೀಡಿದರು.